ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 19 ಸಾಧಕರಿಗೆ 'ಯಕ್ಷಗಾನ ಕಲಾರಂಗ' ಪ್ರಶಸ್ತಿ ಪ್ರದಾನ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ 'ಯಕ್ಷಗಾನ ಕಲಾರಂಗ' ಪ್ರಶಸ್ತಿ ಪ್ರದಾನ ಸಮಾರಂಭ 2021 ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ  ನಡೆಯಿತು.

ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ 6 ಜಿಲ್ಲೆಯ 19 ಮಂದಿ ಕಲಾವಿದರಿಗೆ ಈ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಶಾಸಕ ರಘುಪತಿ ಭಟ್, ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಮೋಹನ್ ಆಳ್ವ, ನಿವೃತ್ತ ಪ್ರಾಧ್ಯಾಪಕ, ಹಿರಿಯ ಯಕ್ಷಗಾನ ಚಿಂತಕ ಡಾ. ಚಂದ್ರಶೇಖರ ದಾಮ್ಲೆ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್, ಕಾರ್ಯದರ್ಶಿ ಮುರಳಿ ಕಡೆಕಾರ್ ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

29/11/2021 10:36 am

Cinque Terre

8.75 K

Cinque Terre

0

ಸಂಬಂಧಿತ ಸುದ್ದಿ