ಮುಲ್ಕಿ: ಮುಲ್ಕಿ ಸಮೀಪದ ಕೊಲಕಾಡಿ ಕುಂಜಾರಗಿರಿ ಶ್ರೀ ಮಹಾಲಿಂಗೇಶ್ವರ ಶಾಸ್ತಾವು ದೇವಸ್ಥಾನದ ದೀಪೋತ್ಸವದ ಪ್ರಯುಕ್ತ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ನಡೆಯುವ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವನ್ನು ಸಮಾಜಸೇವಕಿ ಭಾರತಿ ಬಂಗೇರ ಕಿಲ್ಪಾಡಿ ದೀಪಬೆಳಗಿಸಿ ಚಾಲನೆ ನೀಡಿದರು.
ಈ ಸಂದರ್ಭ ಅವರು ಮಾತನಾಡಿ, ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಯುವಕರನ್ನು ಪ್ರೋತ್ಸಾಹಿಸುತ್ತಿರುವ ಕುಂಜಾರಗಿರಿ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಯುವಕ ಸಂಘದ ಕಾರ್ಯ ಅಭಿನಂದನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗೋಪಿನಾಥ ಪಡಂಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅರ್ಚಕ ವೇದಮೂರ್ತಿ ಶ್ರೀಕಾಂತ್ ಭಟ್, ಯಕ್ಷ ದಿಗ್ಗಜ ಗಣೇಶ್ ಕೊಲಕಾಡಿ, ಆಡಳಿತ ಸಮಿತಿ ಸದಸ್ಯ ಲಕ್ಷ್ಮಣ ಕೋಟ್ಯಾನ್, ಯುವಕ ಸಂಘದ ಅಧ್ಯಕ್ಷ ಅಣ್ಣು ಕೋಟ್ಯಾನ್ ಮೈಲೊಟ್ಟು, ಮಾಜಿ ಉಪಾಧ್ಯಕ್ಷ ಶೇಖರ ಕೊಲಕಾಡಿ, ಹಿರಿಯ ಯಕ್ಷಗಾನ ಕಲಾವಿದ ಅಂಬರೀಶ್ ಕೊಲಕಾಡಿ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ವಾಲಿ ಮೋಕ್ಷ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಿತು.
Kshetra Samachara
04/12/2021 05:47 pm