ಉಡುಪಿ: ಉಡುಪಿ ವಕೀಲರ ಸಂಘದ ವತಿಯಿಂದ ಇಂದು ನ್ಯಾಯಾಲಯದ ಆವರಣದಲ್ಲಿ ವಕೀಲರ ದಿನಾಚರಣೆ ನಡೆಯಿತು.
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಜಿ. ಉಮಾ ಕಾರ್ಯಕ್ರಮವನ್ಬು ಉದ್ಘಾಟಿಸಿದರು.ಬಳಿಕ ದೇಶದ ಪ್ರಥಮ ರಾಷ್ಟ್ರಪತಿ ,ಖ್ಯಾತ ನ್ಯಾಯವಾದಿ ಡಾ.ರಾಜೇಂದ್ರ ಪ್ರಸಾದ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಜಿ. ಉಮಾ ,ಜನಸಾಮಾನ್ಯರಿಗೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಇನ್ನೂ ವಿಶ್ವಾಸ ಉಳಿದಿದೆ.ಈ ವಿಶ್ವಾಸವನ್ನು ಉಳಿಸುವುದರ ಜೊತೆಗೆ ನ್ಯಾಯವಾದಿಗಳ ವೃತ್ತಿ ಘನತೆ ಎತ್ತಿ ಹಿಡಿಯುವ ಕೆಲಸವನ್ನು ,ಯುವ ವಕೀಲರು ಮಾಡಬೇಕು ಎಂದು ಕಿವಿಮಾತು ಹೇಳಿದರು.
ಹಿರಿಯ ವಕೀಲ ಎಂ. ಶಾಂತರಾಮ್ ಶೆಟ್ಟಿ ಅತಿಥಿಗಳ ಪರಿಚಯ ಮಾಡಿದರು.ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್ ಸ್ವಾಗತಿಸಿದರು.ಬೆಂಗಳೂರು ಸಿಎಂಆರ್ ಯೂನಿವರ್ಸಿಟಿ ಸ್ಕೂಲ್ ಆಫ್ ಲೀಗಲ್ ಸ್ಟಡೀಸ್ ಡೀನ್ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿ.ವಿ. ಹುಬ್ಬಳ್ಳಿ ವಿಶ್ರಾಂತ ಕುಲಪತಿ ಪ್ರೊ.ಟಿ.ಆರ್. ಸುಬ್ರಹ್ಮಣ್ಯ, ಕರ್ನಾಟಕ ಸರಕಾರದ ಹೆಚ್ಚುವರಿ ಎಡ್ವೊಕೇಟ್ ಜನರಲ್ ಅರುಣಾ ಶ್ಯಾಮ್ ಎಂ., ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಉಪಸ್ಥಿತರಿದ್ದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ವಂದಿಸಿದರು.
ವಕೀಲ ರಾಜಶೇಖರ್ ಪಿ. ಶ್ಯಾಮರಾವ್ ಕಾರ್ಯಕ್ರಮ ನಿರೂಪಿಸಿದರು.
Kshetra Samachara
04/12/2021 07:38 pm