ಕಾಪು : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ(ರಿ) ಕಾಸರಗೋಡು ಆಯೋಜಿಸಿದ 'ಗಡಿನಾಡ ಕನ್ನಡ ರಾಜ್ಯೋತ್ಸವ' ಸಂದರ್ಭದಲ್ಲಿ 2021ರ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರಿಗೆ
"ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ " ಎಡನೀರು ಮಠಾಧಿಪತಿ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಇಂದು ಕಾಸರಗೋಡಿನ ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು.
ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಶ್ರೀ ಕೆ.ಜಯಪ್ರಕಾಶ್ ಹೆಗ್ಡೆ, ಕರ್ನಾಟಕ ಸರಕಾರದ ಉಪ್ಪಾರ ನಿಗಮದ ಅಧ್ಯಕ್ಷರಾದ ಜಿ.ಕೆ ಗಿರೀಶ್, ಶಾಸಕರುಗಳಾದ ಏನ್ ಎ ನೆಲ್ಲಿಕುನ್ನು, ಎ. ಕೆ.ಎಂ ಅಶ್ರಫ್, ಕಾಸರಗೋಡು ಜಿಲ್ಲಾ ಪರಿಷತ್ತಿನ ಅಧ್ಯಕ್ಷೆ ಶ್ರೀಮತಿ ಬೇಬಿ ಬಾಲಕೃಷ್ಣನ್, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಸ್ಥಾಪಕಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕೆ. ಟಿ ಸುವರ್ಣ, ಚನಿಯಪ್ಪ ನಾಯ್ಕ್, ಎ ಆರ್ ಸುಬ್ಬಯ್ಯಕಟ್ಟೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು
Kshetra Samachara
06/12/2021 12:37 pm