ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: "ವ್ಯಂಗ್ಯ ಚಿತ್ರ ಕಲೆಯಿಂದ ಸಮಾಜದ ಓರೆಕೋರೆ ಅನಾವರಣ"

ಕುಂದಾಪುರ: ವ್ಯಂಗ್ಯಚಿತ್ರ ಕಲಾವಿದ ಸತೀಶ್ ಆಚಾರ್ಯ ವರ್ಷಂಪ್ರತಿ ಆಯೋಜಿಸಿಕೊಂಡು ಬರುತ್ತಿರುವ 'ಕಾರ್ಟೂನ್ ಹಬ್ಬ' ಮೂರು ದಿನಗಳ ವರೆಗೆ ಕುಂದಾಪುರದ ಪಾರಿಜಾತ ಹೋಟೆಲ್ ಎದುರು ಜರುಗಿತು. ʼಮುಂದಿನ 75 ವರ್ಷಗಳು...ʼ ಎಂಬ ಘೋಷವಾಕ್ಯದೊಂದಿಗೆ ಈ ವರ್ಷದ ಕಾರ್ಟೂನು ಹಬ್ಬ ನಡೆಯಿತು.

ಕಾರ್ಯಕ್ರಮದಲ್ಲಿ ಚಿತ್ರಕಲಾವಿದ ಬಾದಲ್ ನಂಜುಂಡಸ್ವಾಮಿ ಅವರು ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರಿಗೆ ವಿಶೇಷ ಕಲಾನಮನ ಸಲ್ಲಿಸಿದರು. ಅವಿಭಜಿತ ದಕ್ಷಿಣ ಕನ್ನಡದ ಮಕ್ಕಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದ್ದು, ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡರು. ಈ ಸಂದರ್ಭ ಕೊರೊನಾ ಯೋಧರಿಗೆ ಗೌರವ ಸಲ್ಲಿಸಲಾಯಿತು.

ಸಮಾಜದ ಆಗುಹೋಗು-ಓರೆಕೋರೆ , ಇಲ್ಲಿನ ತಪ್ಪು ಒಪ್ಪುಗಳನ್ನು ಚಿತ್ರಗಳ ಮೂಲಕ ವ್ಯಕ್ತಪಡಿಸುವ ವ್ಯಂಗ್ಯ ಚಿತ್ರಕಲೆ ವಿಶಿಷ್ಟ ಮಾಧ್ಯಮ. ಮಕ್ಕಳಲ್ಲಿ, ಯುವಪೀಳಿಗೆಯಲ್ಲಿ ಕಲೆಯ ಬಗ್ಗೆ ಆಸಕ್ತಿ ಹೆಚ್ಚಿಸುವುದು ಮತ್ತು ಚಿಂತನೆ ಬೆಳೆಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಆಯೋಜಕ ಸತೀಶ್ ಆಚಾರ್ಯ ಹೇಳಿದರು.

Edited By : Shivu K
Kshetra Samachara

Kshetra Samachara

06/12/2021 01:31 pm

Cinque Terre

5.82 K

Cinque Terre

0

ಸಂಬಂಧಿತ ಸುದ್ದಿ