ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತ್ರಾಡಿ: ಗೌಡಪಾದಾಚಾರ್ಯ ಮಠದ ನೂತನ ಶಾಖಾ ಮಠದ ಉದ್ಘಾಟನೆ

ಅತ್ರಾಡಿ: ಉಡುಪಿ ಆತ್ರಾಡಿಯಲ್ಲಿ ಇಂದು ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠ ಕೈವಲ್ಯಪುರ, ಪೋಂಡಾ, ಗೋವಾ ಇದರ ನೂತನ ಉಡುಪಿ ಶಾಖಾ ಮಠದ ಉದ್ಘಾಟನೆ ಹಾಗೂ ಸ್ವಾಮೀಜಿಯವರ ಮೊಕ್ಕಾಂ ಕಾರ್ಯಕ್ರಮ ನಡೆಯಿತು‌.

ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠ, ಕೈವಲ್ಯಪುರ, ಪೋಂಡಾ, ಗೋವಾದ ಪರಮಪೂಜ್ಯ ಶ್ರೀ ಶ್ರೀ ಶಿವಾನಂದ ಸರಸ್ವತೀ ಸ್ವಾಮಿ ಮಹಾರಾಜ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಿದರು.

ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಶಾಸಕ ಕೆ. ರಘುಪತಿ ಭಟ್ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಆತ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೂಪಾ ಶೆಟ್ಟಿ, ಆತ್ರಾಡಿ ನೂತನ ಶಾಖಾ ಮಠದ ಅಧ್ಯಕ್ಷರಾದ ಸಂತೋಷ್ ವಾಗ್ಳೆ, ಉಜ್ವಲ್ ಡೆವಲಪರ್ಸ್ ಉಡುಪಿಯ ಪುರುಶೋತ್ತಮ ಶೆಟ್ಟಿ, ಎಣ್ಣೆಹೊಳೆ ಶ್ರೀ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅಶೋಕ್ ನಾಯಕ್, ನರಸಿಂಗೆ ಶ್ರೀ ನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರಮೇಶ್ ಸಾಲ್ವಂಕಾರ್, ಮೊಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅಲ್ಚಾರು ರಾಮಚಂದ್ರ ನಾಯಕ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/12/2021 06:05 pm

Cinque Terre

3.4 K

Cinque Terre

0

ಸಂಬಂಧಿತ ಸುದ್ದಿ