ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿ. 25ರಂದು ಉಡುಪಿಯಲ್ಲಿ "ಅಟಲ್ ಟ್ರೋಫಿ" ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ, ಯುವ ಮೋರ್ಚಾ ಉಡುಪಿ ನಗರ ಮತ್ತು ವಾಲಿಬಾಲ್ ಫ್ರೆಂಡ್ಸ್ ಹನುಮಂತನಗರ ಇವರ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಮಾಜಿ ಪ್ರಧಾನಿ ಅಜಾತಶತ್ರು ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಪ್ರಯುಕ್ತ ರಾಷ್ಟ್ರಮಟ್ಟದ ಆಯ್ದ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ "ಅಟಲ್ ಟ್ರೋಫಿ"ಯನ್ನು ಆಯೋಜಿಸಲಾಗಿದೆ. ನಿಟ್ಟೂರು ಸಿಲಾಸ್ ಇಂಟರ್ ನ್ಯಾಷನಲ್ ಶಾಲೆಯ ಮೈದಾನದಲ್ಲಿ ದಿನಾಂಕ 25-12-2021 ರಂದು ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಶಾಸಕ ಕೆ. ರಘುಪತಿ ಭಟ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ರೋಷನ್ ಶೆಟ್ಟಿ, ನಗರ ಸಭಾ ಸದಸ್ಯರಾದ ಸಂತೋಷ್ ಜತ್ತನ್, ವಾಲಿಬಾಲ್ ಫ್ರೆಂಡ್ಸ್ ಹನುಮಂತನಗರ ಇದರ ಅಧ್ಯಕ್ಷರಾದ ದಿನೇಶ್ ಕುಂದರ್, ಮೂಡುಬೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ವಿಶ್ವನಾಥ್ ಪೂಜಾರಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/12/2021 08:28 pm

Cinque Terre

3.37 K

Cinque Terre

0

ಸಂಬಂಧಿತ ಸುದ್ದಿ