ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ವಕೀಲರ ಸಂಘದಿಂದ ನೂತನ ಜಿಲ್ಲಾ ನ್ಯಾಯಾಧೀಶರಿಗೆ ಅಭಿನಂದನಾ ಸಮಾರಂಭ

ಉಡುಪಿ: ಉಡುಪಿಯಲ್ಲಿ ಈ ಹಿಂದೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕರಾಗಿ ಕಾರ್ಯನಿರ್ವಹಿಸಿ ಇದೀಗ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡಿರುವ ಕುಮಾರಿ ಮಮ್ತಾಜ್ ಮತ್ತು ಪ್ರವೀಣ್ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು.ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ ನಾಗರಾಜ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು ವಕೀಲರ ಸಂಘದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಶುಭಾಶಂಸನೆಗೈದರು.

ಸ್ವಾಗತ ಭಾಷಣ ಮಾಡಿದ ಬಿ ನಾಗರಾಜ್ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಬಳಿಕ ನೂತನ ಜಿಲ್ಲಾ ನ್ಯಾಯಾಧೀಶರುಗಳಿಗೆ ಗೌರವಪೂರ್ವಕ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ವಕೀಲರಾದ ಪಿ.ರಂಜನ್ ರಾವ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸುಬ್ರಮಣ್ಯ ಜೆಎನ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ಪ್ರವೀಣ್ ಕುಮಾರ್, ರಾಜಶೇಖರ ಪಿ, ನ್ಯಾಯಮೂರ್ತಿ ಶರ್ಮಿಳಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

17/12/2021 07:06 pm

Cinque Terre

21.76 K

Cinque Terre

0

ಸಂಬಂಧಿತ ಸುದ್ದಿ