ಮುಲ್ಕಿ:ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ "ಗ್ರಾಮೀಣ ಬಡತನ ನಿವಾರಣಾ ಯೋಜನೆ, ಮಿಷನ್ ಅಂತ್ಯೋದಯ ಮತ್ತು ಜನರ ಯೋಜನೆ ,ಅಭಿವೃದ್ಧಿ ಪರಿಕಲ್ಪನೆ" ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ದೀಪ ಬೆಳಗಿಸಿ ತರಬೇತಿಗೆ ಚಾಲನೆ ನೀಡಿ ಮಾತನಾಡಿ ಸರಕಾರದ ಮೂಲಭೂತ ಸೌಕರ್ಯಗಳನ್ನು ಸದುಪಯೋಗಪಡಿಸಿಕೊಂಡು ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಮೂಲಕ ಮಾದರಿ ಗ್ರಾಮ ನಿರ್ಮಾಣ ಸಾಧ್ಯ ಎಂದರು
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ, ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ್ ಪಿ. ಕೆ., ಸದಸ್ಯರಾದ ಜಯಕುಮಾರ್, ಕೃಷ್ಣ ಶೆಟ್ಟಿಗಾರ್, ಪದ್ಮಿನಿ ವಿ ಶೆಟ್ಟಿ, ಕಾರ್ಯದರ್ಶಿ ಯೋಗೀಶ್, ಪಂಚಾಯತ್ ಸಿಬ್ಬಂದಿಗಳು, ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
Kshetra Samachara
18/12/2021 07:10 am