ಕಾಪು: ಜಗದ್ಗುರು ಶ್ರೀ ಮಧ್ವಾಚಾರ್ಯರು ಗುರುದಕ್ಷಿಣೆ ರೂಪದಲ್ಲಿ ದಂಡವೂರಿ ಸೃಷ್ಟಿಸಿದ ದಂಡತೀರ್ಥ ಮಠದ ಶ್ರೀ ರಾಮಕೃಷ್ಣ- ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ನೂತನವಾಗಿ ನಿರ್ಮಿಸಲಾದ ಮಧ್ವ ಮಂಟಪದಲ್ಲಿ ಶ್ರೀ ಮಧ್ವಾಚಾರ್ಯರ ಬಿಂಬ ಪ್ರತಿಷ್ಠಾಪನೆ ಜರುಗಿತು.
ಉಡುಪಿ ಶ್ರೀ ಕೃಷ್ಣ ಮಠದ ಭಾವಿ ಪರ್ಯಾಯ ಪೀಠಾಧಿಪತಿ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಮತ್ತು ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಬಿಂಬ ಪ್ರತಿಷ್ಠಾಪನೆ ಪೂರ್ವಕ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಬಳಿಕ ಕಲಶಾಭಿಷೇಕ, ಪ್ರಸನ್ನ ಪೂಜೆ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಿತು.
ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ದಂಡತೀರ್ಥ ಪ್ರತಿಷ್ಠಾನ ಅಧ್ಯಕ್ಷ ಸೀತಾರಾಮ ಭಟ್ ದಂಡತೀರ್ಥ, ಮಂಗಳೂರು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಉದ್ಯಮಿ ಮನೋಹರ್ ಶೆಟ್ಟಿ ಕಾಪು, ರತ್ನಾಕರ ಶೆಟ್ಟಿ ನಡಿಕೆರೆ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
06/01/2022 09:05 pm