ಉಡುಪಿ: ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ಅಂಗವಾಗಿ ಉಡುಪಿ ನಗರಸಭೆ ಮತ್ತು ಪರ್ಯಾಯ ಮಹೋತ್ಸವ ಸಮಿತಿಯಿಂದ ಇಂದು ರಥಬೀದಿಯ ಪೂರ್ಣಪ್ರಜ್ಞ ಮಂಟಪದಲ್ಲಿ ಪೌರಸನ್ಮಾನ ನಡೆಯಿತು.ಸಭಾ ಕಾರ್ಯಕ್ರಮದಲ್ಲಿ ಪರ್ಯಾಯೋತ್ಸವ ಸಮಿತಿ ಗೌರವ ಕಾರ್ಯಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಸನ್ಮಾನ ಸ್ವೀಕರಿಸಿ ಅನುಗ್ರಹ ಸಂದೇಶ ನೀಡಿದರು.ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅಧ್ಯಕ್ಷೀಯ ಅನುಗ್ರಹ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಳೀಯ ನಗರಸಭಾ ಸದಸ್ಯರಾದ ಮಾನಸ ಸಿ ಪೈ, ಪರ್ಯಾಯ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಸೂರ್ಯ ನಾರಾಯಣ ಉಪಾಧ್ಯಾಯ, ಗುರುರಾಜ ಆಚಾರ್ಯ ನಿಪ್ಪಾಣಿ, ಡಾl. ಮೋಹನ್ ದಾಸ್ ಭಟ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
10/01/2022 07:58 pm