ಮುಲ್ಕಿ: ಮುಲ್ಕಿ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಪ್ರಯುಕ್ತ ಶ್ರೀ ಅದಿಜನಾರ್ದನ ಸೇವಾ ಯುವಕ ಮಂಡಲ(ರಿ) ವತಿಯಿಂದ ವಿವಿಧ ಭಜನಾ ಮಂಡಳಿಗಳ ಸಹಕಾರದೊಂದಿಗೆ ಭಜನಾ ಮಂಗಲೋತ್ಸವ ಸಮಾರೋಪ ಶುಕ್ರವಾರ ರಾತ್ರಿ ನಡೆಯಿತು
ಪ್ರಾತಃಕಾಲ ಸುಮಿತ್ರಾ ದೇವಾಡಿಗ ದೀಪ ಬೆಳಗಿಸಿ ಭಜನಾ ಮಂಗಲೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಿತು.
ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ರಾಮ ಸೇನಾ ಮುಖ್ಯಸ್ಥ ಪ್ರಸಾದ್ ಅತ್ತಾವರ, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ ಮತ್ತಿತರು ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಚಂದ್ರಹಾಸ್. ಎನ್. ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶಶಿಕಲಾ ದೇವಾಡಿಗ, ಕಲ್ಪನಾ, ಮಾಜೀ ಸದಸ್ಯ ಮೋಹನ್ ಕೋಟ್ಯಾನ್, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ ಉಪಾಧ್ಯಕ್ಷ ಪ್ರವೀಣ್ ದೇವಾಡಿಗ, ಸುದೀರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ರಾತ್ರಿ ಮಹಾಪೂಜೆ ಹಾಗೂ ವಿಶೇಷ ಕುಣಿತ ಭಜನೆ, ಅನ್ನ ಸಂತರ್ಪಣೆ ನಡೆಯಿತು.
Kshetra Samachara
14/01/2022 09:56 pm