ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡವೂರು ಗೋಶಾಲೆ ನೂತನ‌ ಕಟ್ಟಡಕ್ಕೆ ಪೇಜಾವರ ಶ್ರೀಗಳಿಂದ ಶಿಲಾನ್ಯಾಸ

ಕೊಡವೂರು; ದೇವಸ್ಥಾನಗಳಲ್ಲಿ ಶಿಲಾ ವಿಗ್ರಹ ಪ್ರತಿಮೆಗಳಲ್ಲಿ ಭಗವಂತನ ಚೈತನ್ಯವನ್ನು ತುಂಬಿ ಆರಾಧಿಸಲಾಗುತ್ತದೆ . ಗೋವುಗಳಲ್ಲಿ ದೇವಾನುದೇವತೆಗಳ ಸನ್ನಿಧಾನ ನಿತ್ಯ ಜಾಗೃತವಾಗಿರುತ್ತದೆ . ಚೈತನ್ಯ ತುಂಬಿದ ವಿಗ್ರಹದಷ್ಟೇ ಗೋವುಗಳೂ ಪ್ರಮುಖವಾಗಿವೆ. ಆದ್ದರಿಂದ ದೇವಳಗಳ ಜೀರ್ಣೋದ್ಧಾರಕ್ಕೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಗೋಶಾಲೆಗಳ ನಿರ್ಮಾಣ, ನವೀಕರಣಗಳಿಗೂ ನೀಡಬೇಕು ಎಂದು ಗೋವರ್ಧನಗಿರಿ ಟ್ರಸ್ಟ್ ಮುಖ್ಯಸ್ಥರೂ ಹಾಗೂ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ.

ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ಉಡುಪಿ ಕೊಡವೂರು ಸಮೀಪವಿರುವ ನಂದಗೋಕುಲ ಗೋಶಾಲೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಸಂದೇಶ ನೀಡಿದರು.

ಕೆ .ಎಂ. ಎಫ್ ಅಧ್ಯಕ್ಷ ಕೆ.ರವಿರಾಜ ಹೆಗ್ಡೆ , ಆಸ್ಟ್ರೇಲಿಯಾದಲ್ಲಿ ಯೋಗ ಶಿಕ್ಷಕರಾಗಿರುವ ರಾಜೇಂದ್ರ ಎಂಕಣ್ಣಮೂಲೆ ಶುಭ ಕೋರಿ ಮಾತಾಡಿದರು.ಬಡಾನಿಡಿಯೂರಿನ ಬಾಲಯ್ಯ ಕುಟುಂಬಿಕರ ಪಂಜುರ್ಲಿ ಟ್ರಸ್ಟ್ ಮುಖ್ಯಸ್ಥ , ದಾನಿ ಉಮೇಶ್ ರಾವ್ , ಕೊಡವೂರು ಶಂಕರನಾರಾಯಣ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ ಸುಧೀರ್ ರಾವ್ , ನಗರಸಭಾ ಸದಸ್ಯ ವಿಜಯ್ ಕೊಡವೂರು , ಡಾ ಸರ್ವೋತ್ತಮ ಉಡುಪ , ನಾಗರಾಜ ಪುರಾಣಿಕ್ , ಇಂಜಿನಿಯರ್ ರಾಜೇಂದ್ರ ಮಯ್ಯ , ಚಂದ್ರಶೇಖರ್ , ಗೋಶಾಲೆ ನಿರ್ವಾಹಕಿ ಪ್ರಮೀಳಾ ಜೋಶಿ ಮೊದಲಾದವರು ಉಪಸ್ಥಿತರಿದ್ದು ಶಿಲಾನ್ಯಾಸ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಸ್ಟ್ರೇಲಿಯಾದ ಯೋಗ ಶಿಕ್ಷಕ ರಾಜೇಂದ್ರ ಎಂಕಣ್ಣ ಎರಡು ಲಕ್ಷ ರೂ , ಕೆ ಎಂ ಎಫ್ ಪರವಾಗಿ ಅಧ್ಯಕ್ಷ ರವಿರಾಜ ಹೆಗ್ಡೆ ಒಂದು ಲಕ್ಷ ರೂ. ದೇಣಿಗೆ ಹಸ್ತಾಂತರಿಸಿದರು.

ವಾಸುದೇವ ಭಟ್ ಪೆರಂಪಳ್ಳಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.ವೇಣುಗೋಪಾಲ ಸಾಮಗರು ಧಾರ್ಮಿಕ ವಿಧಿ ನೆರವೇರಿಸಿದರು. ಕೃಷ್ಣ ಭಟ್ , ವಿಷ್ಣುಮೂರ್ತಿ ಆಚಾರ್ಯ , ಪ್ರಾಣೇಶ್ ಜೋಶಿ ಸಹಕರಿಸಿದರು.

Edited By :
Kshetra Samachara

Kshetra Samachara

19/01/2022 05:02 pm

Cinque Terre

17.24 K

Cinque Terre

0

ಸಂಬಂಧಿತ ಸುದ್ದಿ