ಮಂಗಳೂರು: ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ವಿಜೇತೆ ಭರತನಾಟ್ಯ ಕಲಾವಿದೆ, ನಗರದ ಪಾದುವ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ರೆಮೋನಾ ಪಿರೇರಾ ಅವರೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತನಾಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವೀಡಿಯೊ ಕಾನ್ಫರೆನ್ಸ್‌ನಲ್ಲಿ ತಾಯಿ ಹಾಗೂ ಸಹೋದರನೊಂದಿಗೆ ಪಾಲ್ಗೊಂಡ ರೆಮೋನಾ, ಪ್ರಧಾನಿಯೊಂದಿಗೆ ಮಾತುಕತೆ ನಡೆಸಿದರು. ಇದೇ ವೇಳೆ ರೆಮೋನಾ ತಾಯಿಗೂ ಮೋದಿ ನಮಸ್ಕರಿಸಿದರು. 2022ನೇ ಸಾಲಿನ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ರಾಜ್ಯದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ ರೆಮೋನಾ ಪಿರೇರಾ ಪಾದುವ ಪಿಯು ಕಾಲೇಜಿನ ವಿದ್ಯಾರ್ಥಿನಿ.
ರೆಮೋನಾ ದೇಶದ 16 ರಾಜ್ಯಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ 20 ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಮಂಗಳೂರಿನ ನೃತ್ಯಗುರು ಶ್ರೀವಿದ್ಯಾ ಮುರಳೀಧರ್ ಅವರ ಶಿಷ್ಯೆ. ಈ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯು 1 ಲಕ್ಷ ರೂ. ಬಹುಮಾನ ಒಳಗೊಂಡಿದೆ.
Kshetra Samachara
25/01/2022 04:24 pm