ಉಡುಪಿ: ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿಯವರಿಗೆ ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ವಿಶ್ವಪ್ರಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ನಡೆದ ಈ ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಚೆಂಡೆ ಬಾರಿಸಿ ಉದ್ಘಾಟಿಸಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಗಿರೀಶ್ ಕಾಸರವಳ್ಳಿ ,ಎಂಜಿಎಂ ಕಾಲೇಜಿನ ವೇದಿಕೆ ನಾನು ರಂಗಭೂಮಿಗೆ ಬರಲು ಕಾರಣವಾದ ವೇದಿಕೆ. ಇಲ್ಲಿ ಬಿ.ವಿ ಕಾರಂತರ ಪರಿಚಯವಾಗಿ ಮುಂದೆ ಸಿನಿಮಾಗಳನ್ನು ಮಾಡುವುದಕ್ಕೆ ಪ್ರೇರಣೆಯಾಯಿತು. ಧರ್ಮ ರಾಜಕೀಯಕ್ಕಿಂತ ಕಲೆ ದೊಡ್ಡದು ಎಂದರು. ವೇದಿಕೆಯಲ್ಲಿ ಸಂಸ್ಥೆಯ ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ದೇವೀದಾಸ್ ನಾಯ್ಕ್, ಸಂಸ್ಥೆಯ ಅಧ್ಯಕ್ಷ ಪ್ರೊ. ಶಂಕರ್ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಮಕ್ಕಳಿಂದ ಮಕ್ಕಳ ಮಾಯಾಲೋಕ ನಾಟಕ ಪ್ರದರ್ಶನಗೊಂಡಿತು.
Kshetra Samachara
02/02/2022 10:54 am