ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಆಳ್ವಾಸ್ ‘ಅಗ್ರಿ ಮಂಥನ 2022’

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ಇಂಟರ್ ಇನ್ಸ್ಟಿಟ್ಯೂಶನಲ್ ಮ್ಯಾನೇಜ್ ಮೆಂಟ್ ಫೆಸ್ಟ್ ‘ಅಗ್ರಿ ಮಂಥನ 2022’ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ ಆಳ್ವ ‘’ಡಿಜಿಟಲ್ ಪ್ರಪಂಚದಲ್ಲಿ ಕೃಷಿಯ ಮಹತ್ವದ ಕುರಿತು ಮಾತನಾಡಿದ ಅವರು, ಕೃಷಿ ನಮ್ಮ ದೇಶದ ಬೆನ್ನೆಲುಬಾಗಿದ್ದು, 50 % ದೇಶದ ದುಡಿಯುವ ವರ್ಗ ಈ ಕ್ಷೇತ್ರದ ಮೇಲೆ ಅವಲಂಬಿತವಾಗಿದೆ ಹಾಗೂ ದೇಶದ ಜಿಡಿಪಿಗೆ 20 %ನ್ನು ಕೊಡುಗೆ ನೀಡುತ್ತಿದೆ ಎಂದರು.

ಕೃಷಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಮತ್ತು ಆವಿಷ್ಕಾರದಿಂದಾಗಿ ಕೃಷಿ ಉದ್ಯಮ ಪ್ರಾಮುಖ್ಯತೆ ಹೆಚ್ಚಿಸಿಕೊಂಡಿದೆ. ಭಾರತದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ಕಾಣಲಿದೆ ಎಂದರು.

ಎ.ಐ.ಇ.ಟಿ ಪ್ರಾಶುಂಪಾಲರಾದ ಡಾ ಪೀಟರ್ ಫೆರ್ನಾಂಡೀಸ್, ಎಂಬಿಎ ವಿಭಾಗದ ಮುಖ್ಯಸ್ಥೆ ಪ್ರಿಯಾ ಸಿಕ್ವೇರ, ಸಂಯೋಜಕರಾದ ಗುರುಪ್ರಸಾದ ಪೈ ಮತ್ತು ವಿದ್ಯಾರ್ಥಿ ಸಂಯೋಜಕರಾದ ಪ್ರೀತಿಷ್ ಕುಮಾರ್ ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

12/02/2022 02:56 pm

Cinque Terre

4.34 K

Cinque Terre

0

ಸಂಬಂಧಿತ ಸುದ್ದಿ