ಮುಲ್ಕಿ: ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಪುನರೂರಿನ ಶ್ರೀ ವಿಶ್ವನಾಥ ದೇವಸ್ಥಾನದ ವಠಾರದಲ್ಲಿ "ಪುನರೂರು ಸಂಭ್ರಮ"ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಮಂಗಳೂರು ವಿ ವಿ ಕುಲಪತಿ ಡಾ|ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಉದ್ಘಾಟಿಸಿ ಮಾತನಾಡಿ ಪುನರೂರು ಪ್ರತಿಷ್ಠಾನ ಅನೇಕ ಸಮಾಜಮುಖಿ ಕೈಂಕರ್ಯಗಳನ್ನು ಮಾಡುತ್ತಿದ್ದು ಜನಮನ್ನಣೆ ಗಳಿಸಿದೆ. ಸಂಸ್ಥೆ ಇನ್ನಷ್ಟು ಸಹಾಯಹಸ್ತದ ಮೂಲಕ ವಿಶ್ವಕ್ಕೆ ಮಾದರಿಯಾಗಲಿ ಎಂದು ಶುಭ ಹಾರೈಸಿದರು.
ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕ ವೇದಮೂರ್ತಿ ಲಕ್ಷ್ಮೀ ನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿದರು ಪುನರೂರು ಪ್ರತಿಷ್ಥಾನದ ಗೌರವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಉದ್ಯಮಿ ಶ್ರೀಪತಿ ಭಟ್ ಮೂಡಬಿದ್ರೆ, ಪುನರೂರು ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ, ವಿಜಯಕುಮಾರ್ ಕುಬೆವೂರು, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಸಂಸ್ಥೆಯ ಗೌರಾವಾಧ್ಯಕ್ಷೆ ಉಷಾರಾಣಿ, ಪ್ರಧಾನ ಕಾರ್ಯದರ್ಶಿ ಶ್ರೇಯ ಪುನರೂರು, ಜನವಿಕಾಸ ಸಮಿತಿ ಅಧ್ಯಕ್ಷ ಪ್ರಾಣೇಶ್ ಭಟ್ ದೇಂದಡ್ಕ, ಜಿತೇಂದ್ರ ವಿ ರಾವ್, ಉಪಸ್ಥಿತರಿದ್ದರು
ಕಾರ್ಯಕ್ರಮದಲ್ಲಿ ಪ್ರತಿಭಾ ಸೌರಭ 2021ರ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಬಳಿಕ ವಿದ್ವಾನ್ ಸುಧೀರ್ ಕೊಡವೂರು ಮತ್ತು ವಿದುಷಿ ಮಾನಸಿ ಸುಧೀರ್ ನಿರ್ದೇಶನದ ನೃತ್ಯ ನಿಕೇತನ ಕೊಡವೂರು ಕಲಾವಿದರಿಂದ ನೃತ್ಯ ಸಿಂಚನ ಕಾರ್ಯಕ್ರಮ ನಡೆಯಿತು.
Kshetra Samachara
12/02/2022 09:25 pm