ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: 'ಪಠ್ಯೇತರ ಚಟುವಟಿಕೆಗಳಿಂದ ಆತ್ಮ ಜಾಗೃತಿ ಹೆಚ್ಚುತ್ತದೆ'

ಮೂಡುಬಿದಿರೆ: ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳಲ್ಲಿ ಆತ್ಮ ಜಾಗೃತಿ ಹೆಚ್ಚಾಗಿರುತ್ತದೆ ಎಂದು ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಎ ಕೋಟ್ಯಾನ್ ಹೇಳಿದ್ದಾರೆ.

ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮ ಜಾಗೃತಿ ಬೆಳೆಯುತ್ತದೆ. ಪ್ರಸ್ತುತ ಜಾಗತಿಕವಾಗಿ ಗುರುತಿಸಿಕೊಳ್ಳಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಕ್ಲೌಡ್ ಕಂಪ್ಯೂಟಿಂಗ್, ಡೇಟಾ ಸೈನ್ಸ್ ಮುಂತಾದ ಕೌಶಲ್ಯಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಕಲಿಯುವುದು ಅಗತ್ಯ. ಜೀವನದಲ್ಲಿ ಸಾಧಿಸುವ ಛಲ ಹಾಗೂ ಅವಕಾಶಗಳನ್ನು ಬಳಸಿಕೊಂಡು ಆಸಕ್ತಿಯಿಂದ ತೊಡಗಿಸಿಕೊಂಡಾಗ ಮಾತ್ರ ಯಶಸ್ಸಿನ ಹಾದಿ ಸುಗಮವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ವಿಭಾಗದಲ್ಲಿ 26 ಬಹುಮಾನ, ಕ್ರೀಡೆಯಲ್ಲಿ 5, ಪ್ರೊಡಕ್ಟ್ ಲಾಂಚ್‌ನಲ್ಲಿ 5, ಪ್ರೊಫಿಶಿಯೆನ್ಸಿ 27, ಎನ್‌ಸಿಸಿ ವಿಭಾಗದಲ್ಲಿ 8 ಬಹುಮಾನಗಳನ್ನು ವಿತರಿಸಲಾಯಿತು. ಕಲಾ ಹಾಗೂ ವಾಣಿಜ್ಯ ವಿಭಾಗದ 48 ವಿದ್ಯಾರ್ಥಿ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದವು.

Edited By : Vijay Kumar
Kshetra Samachara

Kshetra Samachara

14/02/2022 03:28 pm

Cinque Terre

2.62 K

Cinque Terre

0

ಸಂಬಂಧಿತ ಸುದ್ದಿ