ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ಶ್ರೀ ಕೋಡ್ದಬ್ಬು ಮತ್ತು ಸಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ವಿಜ್ರಂಭಣೆಯಿಂದ ನಡೆಯಿತು.
ದೈವಸ್ಥಾನದಲ್ಲಿ ಪ್ರಾತಃಕಾಲ ವಿಶೇಷ ಪ್ರಾರ್ಥನೆ ನಡೆದು ನೇಮೋತ್ಸವಕ್ಕೆ ಚಾಲನೆ ನೀಡಲಾಯಿತು. ರಾತ್ರಿ ಅನ್ನಸಂತರ್ಪಣೆ ಹಾಗೂ ಶ್ರೀ ಕೋಡ್ದಬ್ಬು ಹಾಗೂ ತನ್ನಿಮಾನಿಗ ದೈವಗಳ ನೇಮೋತ್ಸವ, ಶ್ರೀ ಧೂಮಾವತಿ ಬಂಟ ದೈವಗಳ ನೇಮೋತ್ಸವ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
15/02/2022 03:02 pm