ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಎಂಸಿ ಮಣಿಪಾಲ:ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಸಂಗೀತ ರಸದೌತಣ

ಮಣಿಪಾಲ: ಬಾಲ್ಯದ ಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಕ್ಯಾನ್ಸರ್ ಪೀಡಿತ ಮಕ್ಕಳು, ಆರೈಕೆ ಮಾಡುವವರು ಮತ್ತು ಕ್ಯಾನ್ಸರ್ ನಿಂದ ಬದುಕುಳಿದವರಿಗೆ ಬೆಂಬಲ ವ್ಯಕ್ತಪಡಿಸಲು ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಾಗತಿಕ ಬಾಲ್ಯದ ಕ್ಯಾನ್ಸರ್ ದಿನದ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು.

ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಶಂಕರ್ ಮಹಾದೇವನ್ ಅಕಾಡೆಮಿ 'ನಿರ್ವಾಣ' ಸಹಭಾಗಿತ್ವದಲ್ಲಿ ಕ್ಯಾನ್ಸರ್ ಪೀಡಿತ ಮಕ್ಕಳು ಮತ್ತು ಅವರ ಆರೈಕೆ ಮಾಡುವವರಿಗೆ ಸಂಗೀತ ಕಾರ್ಯಕ್ರಮ ಮತ್ತು ರಸಪ್ರಶ್ನೆ ಕಾರ್ಯಕ್ರಮವನ್ನು ವರ್ಚುವಲ್ ಆಗಿ ಆಯೋಜಿಸಲಾಗಿತ್ತು. ಕುಮಾರಿ ಮೋಕ್ಷಾ ಮತ್ತು ಕುಮಾರಿ ಆಕಾಂಕ್ಷಾ ಎಂಬ ಇಬ್ಬರು ಮಕ್ಕಳು ಅಕಾಡೆಮಿ ಕಲಾವಿದೆ ಸುಕೃತಿ ಅಜಯ್ ಕುಮಾರ್ ಅವರೊಂದಿಗೆ ಪ್ರದರ್ಶನ ನೀಡಿದರು.

ಮಕ್ಕಳ ಮತ್ತು ಆರೈಕೆ ಮಾಡುವವರ ಮನಸ್ಸನ್ನು ಬೇರೆಡೆಗೆ ತಿರುಗಿಸಲು ಮತ್ತು ಗುಣಪಡಿಸಲು ನಿಯತಕಾಲಿಕವಾಗಿ ಇಂತಹ ಮನರಂಜನಾ ಕಾರ್ಯಕ್ರಮಗಳ ಅಗತ್ಯವಿದೆ ಎಂದು ಮಕ್ಕಳ ರಕ್ತ ಶಾಸ್ತ್ರ ಮತ್ತು ಅಂಕೋಲಜಿ ವಿಭಾಗದ ಮುಖ್ಯಸ್ಥರಾದ ಡಾ.ವಾಸುದೇವ ಭಟ್ ಅಭಿಪ್ರಾಯಪಟ್ಟರು.

Edited By :
Kshetra Samachara

Kshetra Samachara

17/02/2022 07:28 pm

Cinque Terre

6.02 K

Cinque Terre

0

ಸಂಬಂಧಿತ ಸುದ್ದಿ