ಮುಲ್ಕಿ: ಮುಲ್ಕಿ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಆದಿ ಜನಾರ್ಧನ ಸೇವಾ ಯುವಕ ಮಂಡಲ (ರಿ) ವತಿಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ದೇವಸ್ಥಾನದ ಅರ್ಚಕ ಪುರುಷೋತ್ತಮ ಭಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.
ದೇವರ ಸೇವೆ ಮಾಡುವ ಮೂಲಕ ಮನಃಶಾಂತಿ ಜೊತೆಗೆ ಇಷ್ಟಾರ್ಥ ಸಿದ್ಧಿಯಾಗುವುದು ಎಂದು ಅವರು ಆಶೀರ್ವಚನ ನೀಡಿದರು.
ಈ ಸಂದರ್ಭ ಗುರು ಪ್ರಸಾದ್ ಭಟ್ ಮುಂಡ್ಕೂರು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶಶಿಕಲಾ, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್, ಜಯಕರ ಶೆಟ್ಟಿ ಮುಂಬೈ, ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
22/02/2022 06:40 pm