ಮುಲ್ಕಿ: ಮುಲ್ಕಿ ಸಮೀಪದ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 13ನೇ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ನಡೆಯಿತು.
ಪೂಜೆ ನೆರವೇರಿಸಿ ಬಪ್ಪನಾಡು ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ಆಶೀರ್ವಚನ ನೀಡಿ ಪೂಜೆ ಪುರಸ್ಕಾರಗಳ ಮೂಲಕ ಲೋಕದ ಸಮಸ್ತ ರೋಗರುಜಿನಗಳು ನಾಶವಾಗಿ ಶಾಂತಿ ನೆಲೆಸಲಿ ಹಾಗೂ ಶ್ರೀ ಜಾರಂದಾಯ ದೂಮಾವತಿ ಯೂತ್ ಕ್ಲಬ್ ಸಂಘಟನೆ ಇನ್ನಷ್ಟು ಸಹಾಯ ಹಸ್ತದ ಮೂಲಕ ರಾಷ್ಟ್ರಕ್ಕೆ ಮಾದರಿಯಾಗಲಿ ಎಂದರು.
ಈ ಸಂದರ್ಭ ಯೂತ್ ಕ್ಲಬ್ ಅಧ್ಯಕ್ಷ ಜೀವನ್ ಕೋಟ್ಯಾನ್, ದೈವಸ್ಥಾನದ ಸಮಿತಿ ಅಧ್ಯಕ್ಷ ಪ್ರಕಾಶ್ ಸುವರ್ಣ, ಗುರಿಕಾರ ಡಾ. ಹರಿಶ್ಚಂದ್ರ ಸಾಲ್ಯಾನ್, ಸಾನದ ಮನೆ ಕೃಷ್ಣ ಕೋಟ್ಯಾನ್, ಮಹಿಳಾ ಮಂಡಳಿ ಅಧ್ಯಕ್ಷ ಲತಾ ಶೇಖರ್, ಹರಿಶ್ಚಂದ್ರ ವಿ ಕೋಟ್ಯಾನ್ ಉಪಸ್ಥಿತರಿದ್ದರು.
Kshetra Samachara
05/03/2022 11:36 am