ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಹಿಳಾ ಉದ್ಯಮಿಗಳ "ಪವರ್" ಸಂಸ್ಥೆಯಿಂದ ಮಹಿಳಾ ದಿನ‌,ಸಾಧಕಿಯರಿಗೆ ಸನ್ಮಾನ

ಉಡುಪಿ: ಅಂತಾರಾಷ್ಟ್ರೀಯ ಮಹಿಳಾ ದಿವಸದಂದು ಪವರ್ ಸಂಸ್ಥೆ ಸ್ಥಾಪಿಸಲ್ಪಟ್ಟಿತ್ತು. ಪ್ರತಿ ವರ್ಷ ಈ ದಿನದಂದು ಸಂಸ್ಥೆಯ ವಾರ್ಷಿಕೋತ್ಸವವನ್ನು ಚಾರ್ಟರ್ ಡೇ ಹಾಗು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನಾಗಿ ಆಚರಿಸುತ್ತ ಬಂದಿದ್ದೇವೆ. ಅದರಂತೆ ಈ ವರ್ಷ ಮಾರ್ಚ್ 9 ರಂದು ಮಣಿಪಾಲದ ಕಂಟ್ರಿ ಇನ್ ಸಭಾಂಗಣದಲ್ಲಿ ಸಂಜೆ 5-30ಕ್ಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಶ್ರೀಮತಿ ಪೂರ್ಣಿಮಾ, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಪ್ರಖ್ಯಾತ ಚಿತ್ರನಟಿ ವಿನಯಾ ಪ್ರಸಾದ್, ಇವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪವರ್ ಸಂಸ್ಥೆ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

07/03/2022 03:58 pm

Cinque Terre

4.71 K

Cinque Terre

0

ಸಂಬಂಧಿತ ಸುದ್ದಿ