ಉಡುಪಿ: ಕೃಷ್ಣಮಠದ ರಾಜಾಂಗಣದಲ್ಲಿಂದು ಜಿಲ್ಲಾಡಳಿತ ವತಿಯಿಂದ ಅರ್ಥಪೂರ್ಣ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.ಈ ಪ್ರಯುಕ್ತ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆಗೊಂಡಿತು.
ಕಾರ್ಯಕ್ರಮದಲ್ಲಿ ಸಂಜೀವಿನಿ ಗುಂಪಿನ ಮಹಿಳೆಯರಿಗೆ ಚಾಲನಾ ಪರವಾನಗಿ ವಿತರಣೆ, ಮಹಿಳಾ ಸ್ವ-ಸಹಾಯ ಸಂಘಕ್ಕೆ ಟ್ರಾಕ್ಟರ್ ವಿತರಣೆ ,ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಂಜೀವಿನಿ ಒಕ್ಕೂಟದ ಎಂ .ಬಿ .ಕೆ ಮತ್ತು ಎಲ್ .ಸಿ .ಆರ್ .ಪಿ ಮಹಿಳೆಯರನ್ನು ಗೌರವಿಸಲಾಯಿತು. ಪ್ರತಿಭಾ ಪ್ರಶಸ್ತಿ ಪಡೆದ ಮಕ್ಕಳಿಗೆ ಸನ್ಮಾನ ಮಾಡಿ, ಅತ್ಯುತ್ತಮ ಮಹಿಳಾ ಮಂಡಲವನ್ನು ಸನ್ಮಾನಿಸಲಾಯಿತು.ಎನ್ .ಆರ್ .ಎಲ್ .ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಮತ್ತಿತರರು ಉಪಸ್ಥಿತರಿದ್ದರು..
Kshetra Samachara
08/03/2022 11:10 pm