ಮುಲ್ಕಿ: ಅಖಿಲ ಭಾರತ ವಿಮಾ ಪ್ರತಿನಿಧಿಗಳ ಸಂಘಟನೆ (ಎಲ್ಐಸಿಎಒಐ) ಮುಲ್ಕಿ ಘಟಕದ ಮಹಿಳಾ ಒಕ್ಕೂಟದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಮುಲ್ಕಿ ಬಿಲ್ಲವ ಸಂಘದ ನಾರಾಯಣಗುರು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಯೋತಿ ಅಶೋಕ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪನ್ಯಾಸಕಿ ಅಕ್ಷತಾ ನವೀನ್ ಎಡ್ಮೆಮಾರ್ ಮಾತನಾಡಿ, ಮಹಿಳೆಯರು ಸಮಾಜದಲ್ಲಿ ಪ್ರತಿಯೊಂದು ಸಾಮಾಜಿಕ ಚಟುವಟಿಕೆಗಳಲ್ಲಿ ಮುಂದೆ ಬಂದು ಅಸ್ತಿತ್ವವನ್ನು ತೋರಿಸಿ ಸಂಘಟಿತರಾಗಬೇಕು ಎಂದರು
ವೇದಿಕೆಯಲ್ಲಿ ಎಲ್ಐಸಿಎಒ ಐ ರಾಜ್ಯಾಧ್ಯಕ್ಷ ರಮೇಶ್ ಕುಮಾರ್, ವಿಮಾ ಪ್ರತಿನಿಧಿಗಳ ಸಂಘಟನೆಯ ಮುಲ್ಕಿ ಘಟಕದ ಅಧ್ಯಕ್ಷ ಲಕ್ಷ್ಮಣ್ ಸಾಲ್ಯಾನ್ ಪುನರೂರು, ಮಹಿಳಾ ಘಟಕದ ಕಾರ್ಯದರ್ಶಿ ಸಂಗೀತ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು ನಡೆದು ಬಹುಮಾನ ವಿತರಿಸಲಾಯಿತು.
Kshetra Samachara
09/03/2022 11:17 am