ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾರ್ಚ್ 12 ರಂದು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಯಕ್ಷಗಾನ,ಲಲಿತಕಲೆ ಅಧ್ಯಯನ ಕೇಂದ್ರದ ಉದ್ಘಾಟನೆ...

ಪುತ್ತೂರು : ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ‌ ನೂತನವಾಗಿ ಆರಂಭಗೊಳ್ಳಲಿರುವ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರದ ಉದ್ಘಾಟನಾ ಸಮಾರಂಭ ಮಾರ್ಚ್ 12 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕ ಶ್ರೀಧರ.ಎಚ್.ಜಿ ಹೇಳಿದರು. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಮಾರಂಭವನ್ನು ಯಕ್ಷಗಾನ ಕಲಾವಿದ ಫ್ರೋ. ಪ್ರಭಾಕರ ಜೋಷಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ ಭಟ್ ವಹಿಸಲಿದ್ದಾರೆ ಎಂದ ಅವರು ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಕುರಿಯ ಗಣಪತಿ ಶಾಸ್ತ್ರಿ, ಸಂಗೀತ ಗುರು ಕಾಂಚನ ಈಶ್ವರ ಭಟ್ ಮತ್ತು ನೃತ್ಯಗುರು ಯೋಗೀಶ್ವರಿ ಅವರನ್ನು ಸನ್ಮಾನಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

Edited By :
Kshetra Samachara

Kshetra Samachara

10/03/2022 02:44 pm

Cinque Terre

9.72 K

Cinque Terre

0

ಸಂಬಂಧಿತ ಸುದ್ದಿ