ಬ್ರಹ್ಮಾವರ: ಬ್ರಹ್ಮಾವರ ಸಂತೆ ಮಾರುಕಟ್ಟೆ ಬಳಿ ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಸಲುವಾಗಿ ಪ್ರದರ್ಶನ ,ಮಾರಾಟ ಮೇಳದ ಸ್ಟಾಲ್ ನ್ನು ವಾರಂಬಳ್ಳಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಬೇಬಿ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ಯೋಜನಾ ನಿರ್ದೇಶಕರಾದ ಬಾಬು ಎಂ ಉದ್ಘಾಟಿಸಿ ಶುಭ ಹಾರೈಸಿದರು .
ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಇಬ್ರಾಹಂಪುರ್ ,ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವಾ ,ವಾರಂಬಳ್ಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಫರ್ಜಾನಾ ,ಎನ್ ಆರ್ ಎಲ್ ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ,ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣ ,ವಲಯ ಮೇಲ್ವಿಚಾರಕ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
11/03/2022 01:13 pm