ಕಾಪು : ಉಡುಪಿ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಚೇರಿ ಸಹಯೋಗದಲ್ಲಿ ಡಾ. ಗಣೇಶ್ ಗಂಗೊಳ್ಳಿ ಮತ್ತು ಬಳಗದವರಿಂದ ಮಜೂರು ಗ್ರಾ.ಪಂ. ಆವರಣದಲ್ಲಿ ಕ್ಷಯರೋಗದ ಆರೋಗ್ಯ ಮಾಹಿತಿ ಬಗ್ಗೆ ಬೀದಿ ನಾಟಕ ಕಾರ್ಯಕ್ರಮ ಮಾಡಲಾಯಿತು.
ಮಜೂರು ಗ್ರಾ.ಪಂ. ಅಧ್ಯಕ್ಷೆ ಶರ್ಮಿಳಾ ಜೆ. ಆಚಾರ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗಕ್ಕೆ ಸಂಬಂಧಿಸಿದ ತಪಾಸಣೆ ಮತ್ತು ಉಚಿತ ಚಿಕಿತ್ಸೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಕಾಪು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಮಜೂರು ಗ್ರಾಮ ಪಂಚಾಯತ್ ಹಾಗೂ ಕಾಪು ಜೆಸಿಐ ಮತ್ತು ಮಹಿಳಾ ಜೆಸಿ ವಿಭಾಗ ಸಂಯೋಜನೆಯೊಂದಿಗೆ ಕಾರ್ಯಕ್ರಮ ನಡೆಯಿತು.
Kshetra Samachara
11/03/2022 04:27 pm