ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ರಾಜೇಂದ್ರ ಕುಮಾರ್ ರವರು ಪಡುಪಂಣಂಬೂರಿನ ಮುಲ್ಕಿ ಸೀಮೆಯ ಅರಮನೆ ಹಾಗೂ ಅರಸು ಡೈರಿ ಫಾರ್ಮ್ಸ್ ಗೆ ಭೇಟಿ ನೀಡಿದರು.
ಈ ಸಂದರ್ಭ ಅವರು ಮುಲ್ಕಿ ಸೀಮೆಯ ವ್ಯಾಪ್ತಿಯಲ್ಲಿ ಅರಸರ ಮೂಲಕ ನಡೆಯುತ್ತಿರುವ ಸಾಮಾಜಿಕ ಕಾರ್ಯಗಳನ್ನು ಶ್ಲಾಘಿಸಿದರು. ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಡಾ. ರಾಜೇಂದ್ರ ಕುಮಾರ್ ಅವರನ್ನು ಸೀಮೆಯ ವತಿಯಿಂದ ಗೌರವಿಸಿದರು. ಅರಸು ಡೈರಿ ಫಾರ್ಮ್ಸ್ ನ ಗೌತಮ್ ಜೈನ್ ಮುಲ್ಕಿ ಅರಮನೆ, ದಿನೇಶ್ ಸುವರ್ಣ ಬೆಳ್ಳಾಯರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
12/03/2022 08:38 pm