ಕಾರ್ಕಳ: ಕನ್ನಡನಾಡಿನ ಧರ್ಮ ಮತ್ತು ಸಂಸ್ಕೃತಿಯಲ್ಲಿ ಸಹೋದರತ್ವ ಮತ್ತು ಸಾಮರಸ್ಯದ ಮನೋಭಾವನೆ ತುಂಬಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಕಾರ್ಕಳ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕದ ಸಂಸ್ಕೃತಿಯು ಪ್ರಪಂಚದ ಅತ್ಯಂತ ಪ್ರಾಚೀನ ಭಾರತೀಯ ಸಂಸ್ಕೃತಿಗಿಂತ ಭಿನ್ನವಾಗಿಲ್ಲ. ಕರ್ನಾಟಕದ ಪರಂಪರೆಯನ್ನು ಅದರ ವಾಸ್ತುಶಿಲ್ಪ, ಸಂಗೀತ, ಸಾಹಿತ್ಯ, ನೃತ್ಯ ಮತ್ತು ಕರಕುಶಲಗಳಿಂದ ತಿಳಿಯಬಹುದು ಮತ್ತು ಗುರುತಿಸಬಹುದು. ಕನ್ನಡನಾಡಿನ ಧರ್ಮ ಮತ್ತು ಸಂಸ್ಕೃತಿಯಲ್ಲಿ ಸಾಮರಸ್ಯದ ದೃಷ್ಟಿ ಇದೆ ಎಂದರು.
ಕಾರ್ಯಕ್ರಮದಲ್ಲಿ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಮಂಜುಳಾ, ಜಿಲ್ಲಾಧಿಕಾರಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Kshetra Samachara
14/03/2022 09:30 pm