ಮುಲ್ಕಿ : ಸ್ವಾಮಿ ವಿವೇಕಾನಂದರು ಯುವ ಜನಾಂಗಕ್ಕೆ ಬೋಧಿಸಿದ ವಿವೇಕ ಮಾರ್ಗ ಅತ್ಯಂತ ಮೌಲ್ಯಯುತವಾದದ್ದು ಅವರ ವೈಚಾರಿಕತೆ ಮತ್ತು ಆಧ್ಯಾತ್ಮ ಅರಿವು ಎಂದೆಂದಿಗೂ ಅರ್ಥಪೂರ್ಣವಾಗಿದೆ ಎಂದು ಯಕ್ಷಕವಿ, ಅರ್ಥದಾರಿ ಪವನ್ ಕಿರಣಕೆರೆ ಹೇಳಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ಸಭಾಂಗಣದಲ್ಲಿ ಪುನರೂರು ಪ್ರತಿಷ್ಠಾನ ಇದರ ಆಶ್ರಯದಲ್ಲಿ ಹಾಗೂ ಮುಲ್ಕಿ ಜನವಿಕಾಸ ಸಮಿತಿ ಸಹಕಾರದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಆಯೋಜಿಸಿದ್ದ ವಿವೇಕ ಜಾಗೃತಿ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.
ಪುನರೂರು ಪ್ರತಿಷ್ಠಾನ ಯ ಗೌರವಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ತೋಕೂರು ಯುವಕ ಸಂಘದ ಅಧ್ಯಕ್ಷವಿನೋದ್ ಕುಮಾರ್, ತೋಕೂರು ಸುಬ್ರಹ್ಮಣ್ಯ ಸ್ಪೋರ್ಟ್ಸ್ ಕ್ಲಬ್ ನ ಗೌರವಾಧ್ಯಕ್ಷ ಮೋಹನ್ ದಾಸ್ ತೋಕೂರು, ಮೂಲ್ಕಿ ವಿಜಯಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಘಟಕದ ಸ್ವಯಂ ಸೇವಕರು ಉಪಸ್ಥಿತರಿದ್ದರು.
ಪುನರೂರು ಪ್ರತಿಷ್ಠಾನ ದ ಅಧ್ಯಕ್ಷರಾದ ದೇವಪ್ರಸಾದ್ ಪುನರೂರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ಜನವಿಕಾಸ ಸಮಿತಿ ಪ್ರಧಾನ ಕಾರ್ಯದರ್ಶಿ ಶಶಿಕರ ಕೆರೆಕಾಡು ವಂದಿಸಿದರು.
Kshetra Samachara
17/03/2022 09:57 am