ಸುರತ್ಕಲ್: ಬಂಟರ ಸಂಘ ಸುರತ್ಕಲ್, ಲಯನ್ಸ್ ಕ್ಲಬ್ ಹಳೆಯಂಗಡಿ, ಜೆಸಿಐ ಸುರತ್ಕಲ್ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಆಶ್ರಯದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮವು ಆದಿತ್ಯವಾರ ಸುರತ್ಕಲ್ ಬಂಟರ ಭವನದಲ್ಲಿ ನೆರವೇರಿತು.
ಉದ್ಘಾಟನೆಯನ್ನು ಸುರತ್ಕಲ್‌ನ ಹಿರಿಯ ವೈದ್ಯರಾದ ಡಾ. ಟಿ.ಆರ್. ಶೆಟ್ಟಿ ನೆರವೇರಿಸಿ ಮಾತನಾಡಿ, 'ಉದಕದಾನ, ಅನ್ನದಾನ, ಗೋ ದಾನ, ಭೂದಾನ ದಂತೆಯೇ ರಕ್ತದಾನ ಕೂಡಾ ಮಹಾದಾನವಾಗಿದ್ದು ಜನರಲ್ಲಿ ರಕ್ತದಾನದ ಕುರಿತು ಹೆಚ್ಚಿನ ತಿಳುವಳಿಕೆ ಮೂಡಿಸಬೇಕಿದೆ. ರಕ್ತದಾನ ಇನ್ನೊಬ್ಬರ ಜೀವ ಉಳಿಸುತ್ತದೆ. 18 ವರ್ಷದಿಂದ 60 ವರ್ಷದೊಳಗಿನ ಪ್ರತಿಯೊಬ್ಬ ವ್ಯಕ್ತಿಯೂ 3 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ರಕ್ತದಾನದಿಂದ ಆತ್ಮತೃಪ್ತಿ ಸಿಗುತ್ತದೆ. ರಕ್ತದಾನದಿಂದ ಅರೋಗ್ಯ ವೃದ್ಧಿಸುತ್ತದೆ. ಮಾನಸಿಕ, ಭಾವನಾತ್ಮಕ ಆರೋಗ್ಯಕ್ಕೆ ಪೂರಕವಾಗಿರುತ್ತದೆ. ಆದ್ದರಿಂದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕು' ಎಂದು ಕರೆ ನೀಡಿದರು.
ಲ. ನಾಗೇಶ್ ಕುಮಾರ್ ಎನ್. ಜೆ., ಜೆ ಎಫ್ ಎಂ ರಾಜೇಶ್ವರಿ ಡಿ. ಶೆಟ್ಟಿ, ಕೆಎಂಸಿ ಆಸ್ಪತ್ರೆಯ ಡಾ. ಕೇಸಿಯಾ, ಹಳೆಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಅರುಣ್ ಕುಮಾರ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜಾ, ಪ್ರತಾಪ್ ಶೆಟ್ಟಿ, ಉಲ್ಲಾಸ್ ಶೆಟ್ಟಿ, ಕೋಶಾಧಿಕಾರಿ ರತ್ನಾಕರ್ ಶೆಟ್ಟಿ, ಮಹಿಳಾ ವೇದಿಕೆಯ ಚಿತ್ರಾ ಜೆ. ಶೆಟ್ಟಿ, ವಿಜಯ ಮೆಡಿಕಲ್ ಎಂ. ಡಿ. ದಯಾನಂದ ಶೆಟ್ಟಿ ಉಪಸ್ಥಿತರಿದ್ದರು.
Kshetra Samachara
20/03/2022 10:24 am