ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲಾ ನಾಟಕ ಕಲಾವಿದರ ಒಕ್ಕೂಟ ಅಸ್ತಿತ್ವಕ್ಕೆ: ಸಾಧಕರಿಗೆ ಸನ್ಮಾನ

ಉಡುಪಿ: ಉಡುಪಿ ಜಿಲ್ಲಾ‌ ನಾಟಕ ಕಲಾವಿದರ ಒಕ್ಕೂಟಕ್ಕೆ ಚಾಲನೆ ನೀಡಲಾಯಿತು.ಕಲಾವಿದ ಅತಿಥಿಗಳು ದೀಪ ಬೆಳಗುವ ಮೂಲಕ ಒಕ್ಕೂಟಕ್ಕೆ ಚಾಲನೆ ನೀಡಿದರು.

ಕೊರೋನಾ ಸಂದರ್ಭದಲ್ಲಿ ಕಲಾವಿದರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ.ಇದುವರೆಗೆ ಕಲಾವಿದರು ತಮ್ಮನ್ನು ಕೇಳುವವರಿಲ್ಲ ಅನ್ನುವ ಭಾವನೆ ತೊಡೆದು ನಮಗೂ ಒಂದು ಸಂಘಟನೆ ಇದೆ ಎಂಬುದನ್ನು ಎದೆತಟ್ಟಿ ಹೇಳುವಂತಾಗಿದೆ.ಜಿಲ್ಲೆಯ ಹಲವು ನಾಟಕ ತಂಡಗಳ ಮುಖ್ಯಸ್ಥರು ಒಟ್ಟಾಗಿ ಒಕ್ಕೂಟ ರಚಿಸಿದ್ದಾರೆ.ನಾಟಕ ಕಲಾವಿದರಿಗೆ ಸಮಸ್ಯೆಗಳಾದಾಗ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಮತ್ತು ಸಮಾಜಪರ ಮತ್ತು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ಕಲಾವಿದರು ತೊಡಗಿಕೊಳ್ಳುವ ನಿಟ್ಟಿನಲ್ಲಿ ಒಕ್ಕೂಟವನ್ನು ರಚಿಸಲಾಗಿದೆ ಎಂದು ದೇಯಿಬೈದೆತಿ ನಿರ್ದೇಶಕ ಸೂರ್ಯೋದಯ ಪೆರಂಪಳ್ಳಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ‌ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹರಿಪ್ರಸಾದ್ ನಂದಳಿಕೆ, ಸುಜಿತ್ ನಿಟ್ಟೆ, ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ರವಿರಾಜ್ ಎಚ್ ಪಿ, ಕೊಂಕಣಿ‌ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ದಿನೇಶ್ ಕಲ್ಲೊಟ್ಟೆ ಇವರನ್ನು ಸನ್ಮಾನಿಸಲಾಯಿತು.ಒಕ್ಕೂಟದ ಅಧ್ಯಕ್ಷ ಲೀಲಾಧರ ಶೆಟ್ಟಿ ಸಹಿತ ಹಿರಿಯ ಕಿರಿಯ ಕಲಾವಿದರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

21/03/2022 04:58 pm

Cinque Terre

2.56 K

Cinque Terre

0

ಸಂಬಂಧಿತ ಸುದ್ದಿ