ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಯ ಯಾವುದೇ ದೇವಸ್ಥಾನಗಳಲ್ಲೂ ಅನ್ಯಧರ್ಮೀಯರಿಗೆ ಅವಕಾಶ ನೀಡಬಾರದು: ವಿ ಎಚ್ ಪಿ

ಉಡುಪಿ: ಜಿಲ್ಲೆಯ ಎಲ್ಲ ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ನಡೆಯುವ ಜಾತ್ರಾ ಮಹೋತ್ಸವಗಳಲ್ಲಿ ವ್ಯಾಪಾರಕ್ಕೆ ಅನ್ಯಧರ್ಮೀಯರಿಗೆ ಅವಕಾಶ ನೀಡಬಾರದು ಎಂದು ವಿಶ್ವ ಹಿಂದು ಪರಿಷದ್ ಆಗ್ರಹಿಸಿದೆ.

ಈ ದೇಶದ ಸಂವಿಧಾನಕ್ಕೆ ಬೆಲೆ ಕೊಡದ, ಈ ನೆಲದ ಕಾನೂನನ್ನು ಗೌರವಿಸದ ಮತ್ತು ಹಿಂದೂ ಸಮಾಜದ ಧಾರ್ಮಿಕ ನಂಬಿಕೆಗಳಿಗೆ ಪದೇ ಪದೇ ಅವಹೇಳನ ಗೈಯುವ ಮತಾಂಧರಿಗೆ ಉಡುಪಿ ಜಿಲ್ಲೆಯ ಯಾವುದೇ ದೇವಸ್ಥಾನ ಮತ್ತು ದೈವಸ್ಥಾನಗಳ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಗ್ರಹಿಸುತ್ತದೆ.

ಕಾಪು, ಪಡುಬಿದ್ರೆ ಪೆರ್ಡೂರು, ಪೆರ್ಣಂಕಿಲ ದೇವಸ್ಥಾನಗಳಲ್ಲಿ ತೆಗೆದುಕೊಂಡ ದಿಟ್ಟ ನಿರ್ಧಾರವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸ್ವಾಗತಿಸುತ್ತದೆ.ಇದೇ ನಿರ್ಧಾರವನ್ನು ಜಿಲ್ಲೆಯ ಎಲ್ಲ ದೇವಸ್ಥಾನಗಳ ಆಡಳಿತ ಮಂಡಳಿಗಳು ಮುಂದುವರಿಸಬೇಕೆಂದು ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.

Edited By : PublicNext Desk
Kshetra Samachara

Kshetra Samachara

22/03/2022 08:42 pm

Cinque Terre

12.87 K

Cinque Terre

5

ಸಂಬಂಧಿತ ಸುದ್ದಿ