ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಕಾರ್ಯಗಳು ಸಂಪನ್ನಗೊಂಡಿದ್ದು ಶಿಲೆದಾರು ಶಿಲ್ಪಗಳಿಂದ ಕೂಡಿದ ದೇವಾಲಯದಲ್ಲಿ ಶ್ರೀ ಪ್ರಸನ್ನ ಗಣಪತಿ, ಶ್ರೀ ಭದ್ರಕಾಳಿ, ಶ್ರೀ ನಾಗದೇವರ ಸಹಿತ ಶ್ರೀ ಮಹಾಲಕ್ಷ್ಮೀ ದೇವಿಯ ಪುನರ್ ಪ್ರತಿಷ್ಠಾಪನೆಮಾಡಲಾಗಿದೆ.
ಈ ಪ್ರಯುಕ್ತ ಅಷ್ಟಬಂಧ ಬ್ರಹ್ಮಕಲಶೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವಗಳನ್ನೊಳಗೊಂಡ ವೈಧಿಕ ವಿಧಿ ವಿಧಾನಗಳನ್ನು ಇದೇ ಬರುವ ಎಪ್ರಿಲ್ 1 ರಿಂದ ಎಪ್ರಿಲ್ 15 ರವರೆಗೆ ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ, ಹಿರಿಯ ಅರ್ಚಕರಾದ ವೆಂಕಟನರಸಿಂಹ ಉಪಾಧ್ಯಾಯ ಹಾಗೂ ರಾಘವೇಂದ್ರ ಉಪಾಧ್ಯಾಯರ ಉಪಸ್ಥಿತಿಯಲ್ಲಿ ಮತ್ತು ಯತಿವರೇಣ್ಯರ ಶುಭಾಶೀರ್ವಾದಗಳೊಂದಿಗೆ ವೈಭವೋಪೇತವಾಗಿ ನಡೆಸಲು ಸಂಕಲ್ಪಿಸಲಾಗಿದೆ.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳಿಂದ 2 ರಿಂದ 3 ಲಕ್ಷದಷ್ಟು ಭಕ್ತಾಧಿಗಳು ಆಗಮಿಸುವ ನಿರೀಕ್ಷೆಯಿದೆ. ಆಗಮಿಸುವ ಎಲ್ಲಾ ಭಕ್ತಾಧಿಗಳಿಗೂ ದಿನಂಪ್ರತಿ ಮಧ್ಯಾಹ್ನ ಹಾಗೂ ರಾತ್ರಿ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಏ.1 ರಿಂದ ಏ.15 ರತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ,ಮಾಜಿ ಸಿಎಂಯಡಿಯೂರಪ್ಪ ,ಸಿದ್ಧರಾಮಯ್ಯ ಸಹಿತ ನಾಡಿನ ಗಣ್ಯರು ,ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಾಡೋಜ ಡಾ| ಜಿ.ಶಂಕರ್ ಮಾಹಿತಿ ನೀಡಿದರು.
Kshetra Samachara
24/03/2022 06:06 pm