ಮುಲ್ಕಿ: ಮುಲ್ಕಿ ಸಮೀಪದ ಕಿಲ್ಪಾಡಿ ಶ್ರೀ ಕುಮಾರಮಂಗಿಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಧೃಡ ಕಲಶಾಭಿಷೇಕ ಶಿಬರೂರು ಬ್ರಹ್ಮ ಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಪ್ರಾತಃಕಾಲ ವಿಶೇಷ ಪ್ರಾರ್ಥನೆ, ಪುಣ್ಯಾಹ, ಧೃಢ ಕಲಶ, ಅಧಿವಾಸ ಹೋಮಗಳು, ಗಣಯಾಗ, ಶಾಂತಿ ಪ್ರಾಯಶ್ಚಿತ ಹೋಮಗಳು, ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ ನಾಗದೇವರಿಗೆ ಸಾಮೂಹಿಕ ಆಶ್ಲೇಷಾ ಬಲಿ, ಪ್ರಧಾನ ಹೋಮ, ಮಹಾಪೂಜೆ, ವಟು ಆರಾಧನೆ, ಪ್ರಸಾದ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು
Kshetra Samachara
28/03/2022 07:36 am