ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ: ಸಂಜೀವಿನಿ ಕಲಾ ಸಿಂಚನ ಕಾರ್ಯಕ್ರಮಕ್ಕೆ ಚಾಲನೆ

ಮಲ್ಪೆ: ಸಮುದಾಯ ಆಧಾರಿತ ಪ್ರವಾಸೋದ್ಯಮದಲ್ಲಿ ಉಡುಪಿ ಜಿಲ್ಲೆಯ ಸ್ವಸಹಾಯ ಸಂಘದ 20 ಮಹಿಳೆಯರು ಸೇರಿದಂತೆ ಒಟ್ಟು 50 ಮಂದಿಗೆ ಒಂದು ತಿಂಗಳ ಕಾಲ ತರಬೇತಿ ನೀಡಲಾಗಿದೆ ಎಂದು ಉಡುಪಿ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ತಿಳಿಸಿದ್ದಾರೆ.

ಮಲ್ಪೆ ಪ್ಯಾರಡೈಸ್ ಗ್ರೂಪ್ ಆಫ್ ರೆಸಾರ್ಟ್ಸ್ ಹಾಗೂ ಮಣಿಪಾಲ ವೆಲ್ಕಮ್ ಗ್ರೂಪ್ ಗ್ರಾಜುಯೇಟ್ ಸ್ಕೂಲ್ ಆಫ್ ಹೊಟೇಲ್ ಅಡ್ಮಿಸ್ಟ್ರೇಷನ್ ಉಡುಪಿ ಜಿಲ್ಲಾ ಪಂಚಾಯತ್ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಸಹಯೋಗದಲ್ಲಿ ರೆರ್ಸಾಟ್ನಲ್ಲಿ ಆಯೋಜಿಸಲಾದ ಸಮುದಾಯ ಆಧಾರಿತ ಪ್ರವಾಸೋದ್ಯಮ ಹಾಗೂ ಸಂಜೀವಿನಿ ಕಲಾ ಸಿಂಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಒಂದು ತಿಂಗಳ ಕಾಲ ಆನ್ಲೈನ್ ಟ್ರೈನಿಂಗ್ ಕೋರ್ಸ್ ಇದಾಗಿದ್ದು, ಈವರೆಗೆ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತದೆ. ಇದರಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ, ಇಂಗ್ಲಿಷ್ ಸಹಿತ ವಿವಿಧ ಭಾಷಾ ಕೌಶಲ್ಯ, ತಮ್ಮಲ್ಲಿರುವ ಪ್ರತಿಭೆಯನ್ನು ಉತ್ತೇಜಿಸಿ ಪ್ರವಾಸಿಗರನ್ನು ಆಕರ್ಷಿಸುವಂತೆ ಮಾಡುವ ಬಗ್ಗೆ ಹೇಳಿಕೊಡಲಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಅಭಿಯಾನದ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಸಂಜೀವಿನಿ ಸ್ವಸಹಾಯ ಗುಂಪಿನ ಮಹಿಳೆಯರಿಂದ ಚಂಡೆ ವಾದನ, ಯಕ್ಷಗಾನ, ಭತ್ತ ಕುಟ್ಟುವ ಹಾಡು, ಸಂಗೀತ ರಸಮಂಜರಿ, ಪಾಡ್ದನ,ಕೋಲಾಟ ಸಹಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನಡೆಯಿತು.

Edited By : PublicNext Desk
Kshetra Samachara

Kshetra Samachara

28/03/2022 04:32 pm

Cinque Terre

3.09 K

Cinque Terre

0

ಸಂಬಂಧಿತ ಸುದ್ದಿ