ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

36ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳ

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕೂಟೇಲು ನೇತ್ರಾವತಿ ನದಿ ಕಿನಾರೆಯಲ್ಲಿ ಅಶೋಕ್ ರೈ ಸಾರಥ್ಯದ 36ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳ ನಡೆಯುತ್ತಿದೆ. 150 ಕ್ಕೂ ಹೆಚ್ಚು ಜೋಡಿ ಕೋಣಗಳು ಈ ಕಂಬಳದಲ್ಲಿ ಪಾಲ್ಗೊಂಡಿದ್ದು ಎಪ್ರಿಲ್ 2 ರಂದು ಕಂಬಳಕ್ಕೆ ಅದ್ದೂರಿಯಾಗಿ ಚಾಲನೆ ದೊರೆತಿದೆ.

ಕಂಬಳ ಆರಂಭಕ್ಕೂ ಮುನ್ನ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ.ಅಲ್ಲಿಂದ ಕಂಬಳ ಗದ್ದೆ ತನಕ ಆಕರ್ಷಕ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಕಂಬಳ ಕೋಣಗಳು ,ಗೊಂಬೆ ಕುಣಿತ, ಕೀಳು ಕುದುರೆ ,ಬ್ಯಾಂಡ್ ಸೆಟ್ ಸೇರಿದಂತೆ ಕೋಣದ ಯಜಮಾನರು ,ಕಂಬಳ ಸಮಿತಿ ಪದಾಧಿಕಾರಿಗಳು ಹಾಗೂ ಕಂಬಳ ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಈ ಬಾರಿಯ ಕಂಬಳ ಕೂಟವನ್ನು ಸಹಸ್ರಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉಪ್ಪಿನಂಗಡಿ ವಿಜಯ ,ವಿಕ್ರಮ ಜೋಡುಕರೆ ಕಂಬಳ ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ.

ಸಭಾ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ಮಾಜಿ ಸಚಿವ ರಮನಾಥ ರೈ, ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ತುಳುಚಿತ್ರನಟ ಭೋಜರಾಜ್ ವಾಮಂಜೂರು ಸೇರಿದಂತೆ ಹಲವು ಮಂದಿ ಗಣ್ಯರು ಭಾಗವಹಿಸಿದ್ದರು.

Edited By : Shivu K
Kshetra Samachara

Kshetra Samachara

03/04/2022 10:59 am

Cinque Terre

10.94 K

Cinque Terre

0

ಸಂಬಂಧಿತ ಸುದ್ದಿ