ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: "ಯಕ್ಷಕಲೆಯನ್ನು ಕ್ಷಯವಾಗಿಸೋದು ಬೇಡ ಅಕ್ಷಯವಾಗಿಸೋಣ"

ಸುರತ್ಕಲ್: ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ "ಯಕ್ಷಸಿರಿ" ಯಕ್ಷಗಾನ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ಬಂಟರ ಸಂಘದಲ್ಲಿ ಜರುಗಿತು.

ಪಂಚ ಯಕ್ಷಗಾನ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ "ಯಕ್ಷಗಾನ ತರಬೇತಿ ಕೇಂದ್ರಗಳು ಅನೇಕ ಕಡೆಗಳಲ್ಲಿ ಪ್ರಾರಂಭಗೊಳ್ಳುತ್ತವೆ. ಆದರೆ ದಿನಕಳೆದಂತೆ ತರಬೇತಿ ಪಡೆಯುವವರ ಸಂಖ್ಯೆ ಕಡಿಮೆಯಾಗುತ್ತದೆ. ಆದರೆ ಸುರತ್ಕಲ್ ಬಂಟರ ಸಂಘ ಇತರರಿಗೆ ಸ್ಫೂರ್ತಿಯಾಗಿ ಕೆಲಸ ಮಾಡುತ್ತಿರುವುದು ಶ್ಲಾಘನೀಯಎಂದರು.

ಮುಖ್ಯ ಅತಿಥಿಯಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸದಸ್ಯ ನವನೀತ್ ಶೆಟ್ಟಿ ಕದ್ರಿ ಮಾತನಾಡಿದರು

ಸಾಂಸ್ಕೃತಿಕ ಸಮಿತಿ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ ಅತಿಥಿಗಳನ್ನು ಸ್ವಾಗತಿಸಿದರು. ಇತ್ತೀಚಿಗೆ ನಿಧನರಾದ ಕಟೀಲು ಮೇಳದ ಪ್ರಧಾನ ಭಾಗವತರಾದ ಪ್ರಸಾದ ಬಲಿಪರನ್ನು ಸ್ಮರಿಸಲಾಯಿತು. ಸುರತ್ಕಲ್ ಬಂಟರ ಸಂಘ ನಿಕಟಪೂರ್ವ ಅಧ್ಯಕ್ಷಉಲ್ಲಾಸ್ ಆರ್. ಶೆಟ್ಟಿ ಅವರು ಪ್ರಾಸ್ತಾವಿಕ ಮಾತಾನ್ನಾಡಿದರು.

ಅಗರಿ ರಾಘವೇಂದ್ರ ರಾವ್, ಯಕ್ಷಗಾನ ಅಕಾಡೆಮಿ ಸದಸ್ಯ ಮಾಧವ ಭಂಡಾರಿ ಕುಳಾಯಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸಂತೋಷ್ ಮಹಿಳಾ ಘಟಕದ ಅಧ್ಯಕ್ಷೆ ಚಿತ್ರಾ ಜೆ. ಶೆಟ್ಟಿ, ಯಕ್ಷ ಸಿರಿ ಸಹಸಂಚಾಲಕಿ ಕೇಸರಿ ಎಸ್. ಪೂಂಜಾ, ಕೇಶವ ಶೆಟ್ಟಿ ಪಡ್ರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಯಕ್ಷಗುರು ರಾಕೇಶ್ ರೈ ಅಡ್ಕ ಗೌರವಿಸಲಾಯಿತು. ಲೋಕಯ್ಯ ಶೆಟ್ಟಿ ಮುಂಚೂರು ವಂದನಾರ್ಪಣೆಗೈದರು. ರಾಜೇಶ್ವರಿ ಡಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

15/04/2022 07:28 am

Cinque Terre

3.03 K

Cinque Terre

0

ಸಂಬಂಧಿತ ಸುದ್ದಿ