ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಎ.23, 24ರಂದು ದಿ. ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ಆನಂದೋತ್ಸವ-2022

ಉಡುಪಿ: ರಂಗಭೂಮಿ ಉಡುಪಿ ವತಿಯಿಂದ ದಿ. ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ಆನಂದೋತ್ಸವ-2022 ಅನ್ನು ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಎ.23 ಹಾಗೂ 24ರಂದು ಹಮ್ಮಿಕೊಳ್ಳಲಾಗಿದೆ ಎಂದು ರಂಗಭೂಮಿ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎ.23ರ ಸಂಜೆ 5.45ಕ್ಕೆ ಆನಂದೋತ್ಸವದ ಉದ್ಘಾಟನೆಯನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ.ಶಂಕರ್ ನೆರವೇರಿಸಲಿದ್ದಾರೆ. ರಾಷ್ಟ್ರೀಯ ಸಂಶೋಧನ ಪ್ರಾಧ್ಯಾಪಕ ಡಾ. ಎಂ.ಎಸ್.ವಲ್ಲಿಯತ್ತನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇವರು ರಂಗಭೂಮಿ ಮೂಲಕ 2018ರಿಂದ ಕೊಡಮಾಡುವ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ ಪ್ರಶಸ್ತಿಯನ್ನು ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಅವರಿಗೆ ನೀಡಲಾಗುವುದು ಎಂದರು.

Edited By : Manjunath H D
Kshetra Samachara

Kshetra Samachara

21/04/2022 02:09 pm

Cinque Terre

3.76 K

Cinque Terre

0

ಸಂಬಂಧಿತ ಸುದ್ದಿ