ಬಂಟ್ವಾಳ: ಪುಂಜಾಲಕಟ್ಟೆಯಲ್ಲಿರುವ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಯೋಜಿಸಿರುವ 14ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಇಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆದಿದ್ದು, 20 ಜೋಡಿ ಹಸೆಮಣೆಗೇರಿದರು.
ಈ ಸಂದರ್ಭ ಮಾಣಿಲ ಶ್ರೀ ಧಾಮದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿದರು. ಸ್ವಸ್ತಿಕ್ ಫ್ರೆಂಡ್ಸ್ ಗೌರವಾಧ್ಯಕ್ಷ, ಜಿಪಂ ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಮಾತನಾಡಿದರು.
ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಪೆದುಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಡಾಜೆಗುತ್ತು ರವಿಶಂಕರ ಶೆಟ್ಟಿ, ಶ್ರೀ ಕ್ಷೇ.ಧ.ಗ್ರಾ.ಯೋ.ಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ವಧು- ವರರಿಗೆ ಶುಭ ಹಾರೈಸಿದರು. ಇದೇ ವೇಳೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿಯನ್ನು ಸಾಧಕರಿಗೆ ನೀಡಲಾಯಿತು.
Kshetra Samachara
24/04/2022 09:22 pm