ಮುಲ್ಕಿ: ದೈವ ದೇವಸ್ಥಾನದ ಮೂಲಕ ನಮ್ಮ ಸಂಸ್ಕೃತಿ ಸಂಸ್ಕ್ರರ ಉಳಿಸಬೇಕಾಗಿದೆ ಎಂದು ಶಾಸಕ ಉಮನಾಥ ಕೋಟ್ಯಾನ್ ಹೇಳಿದರು. ಅವರು ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಸ್ವಾಗತ ಗೋಪುರದ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಕಂಟಕದಿಂದ ಕೆಲವು ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ಜಾತ್ರೆಗಳು ಮೊಕಟುಗೊಂಡಿದ್ದು ಈ ವರ್ಷ ಬಹುತೇಕ ದೈವ ದೇವಸ್ಥಾನಗಳು ಮತ್ತೆ ತಮ್ಮ ಧಾರ್ಮಿಕ ಕಾರ್ಯಚಟುವಟಿಕೆಯಲ್ಲಿ ಚುರುಕುಗೊಂಡಿದೆ ಎಂದರು.
ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ ಧಾರ್ಮಿಕ ಕೇಂದ್ರದ ಅಭಿವೃದ್ಧಿಯಿಂದ ಧರ್ಮ ಜಾಗೃತಿ ನಡೆಯಿತ್ತಿದೆ ನಿರಂತರ ಧಾರ್ಮಿಕ ಕಾರ್ಯಗಳು ನಡೆಯುತ್ತಿರಲಿ ಎಂದರು.ಕಾರ್ಯಕ್ರಮದಲ್ಲಿ ಕಟೀಲು ದೇವಸ್ಥಾನದ ಅರ್ಚಕ ವೆ. ಮೂ. ಅನಂತ ಪದ್ಮನಾಭ, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ , ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ರೋಹಿತ್ ಕುಮಾರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
25/04/2022 07:03 pm