ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಮನೆಯಂಗಳದಲ್ಲಿ ಸಾಹಿತ್ಯ, ಯಕ್ಷ ಸಂಭ್ರಮ!

ಕುಂದಾಪುರ: ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕ, ಗೆಳೆಯರ ಬಳಗ ಕಾರ್ಕಡ ಹಾಗೂ ಸಾಲಿಗ್ರಾಮ ಇವರ ಸಂಯುಕ್ತ ಆಶ್ರಯದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಹಾಗೂ ಯಕ್ಷಗಾನ ಸಂಭ್ರಮ ಭೂಮಿಕಾ ಮನೆಯಂಗಳ ಕಾರ್ಕಡ ಎಂಬಲ್ಲಿ ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರು ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಕಲಾ ಸಾಹಿತಿ ಜನಾರ್ಧನ ಹಂದೆ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಜನಾರ್ಧನ ಹಂದೆ, ಸಾಹಿತ್ಯ ದೀಪ ಕನ್ನಡ ಸಾಹಿತ್ಯ ಜ್ಯೋತಿಯನ್ನು ಬೆಳಗಬಲ್ಲದು. ಈ ಕಾರ್ಯ ಹೀಗೆ ಮುಂದುವರಿದು ಅನೇಕ ಸಾಹಿತ್ಯಾಭಿಮಾನಿಗಳಿಗೆ ಪ್ರೇರಣೆಯಾಗಲಿ ಎಂದರು.

ಇದೇ ಸಂದರ್ಭದಲ್ಲಿ ಭಾಗವತ ರಾಘವೇಂದ್ರ ಮಯ್ಯ ದಂಪತಿಗಳಿಗೆ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗೆಳೆಯರ ಬಳಗ ಕಾರ್ಕಡ ಇದರ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ, ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಮಚಂದ್ರ ಐತಾಳ್,ಇನ್ನಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/05/2022 08:28 am

Cinque Terre

1.58 K

Cinque Terre

0

ಸಂಬಂಧಿತ ಸುದ್ದಿ