ಉಡುಪಿ : ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಮಹಾಮಾಯಾ ಭಜನಾ ಮಂಡಳಿ ಈಶ್ವರನಗರ ಮಣಿಪಾಲ, ವಿಷ್ಣುಮೂರ್ತಿ ಭಜನಾ ಮಂಡಳಿ ಕರ್ವಾಲು ಅಲೆವೂರು, ಪರಿವರ್ತನಾ ಫೌಂಡೇಶನ್ ಮಣಿಪಾಲ ಇವುಗಳ ಸಹಯೋಗದಲ್ಲಿ ರಾಜ್ಯ ಮಟ್ಟದ ಭಜನಾ ಕಮ್ಮಟವನ್ನು ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ ಆಯೋಜಿಸಲಾಗಿತ್ತು.ಕಮ್ಮಟವನ್ನು ಮಠದ ದಿವಾನ ವರದರಾಜ್ ಭಟ್ ಉದ್ಘಾಟಿಸಿದರು.
ಎಂ.ಎಸ್.ಗಿರಿಧರ್ ಬೆಂಗಳೂರು ಭಜನಾ ಕಮ್ಮಟ ನಡೆಸಿಕೊಟ್ಟರು. ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಿದರು. ವಿಶೇಷ ಸಾಧನೆಗೈದ ಸಾಧಕರನ್ನು ಗೌರವಿಸಲಾಯಿತು. ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗು ಕುಣಿತಾ ಭಜನೆ ನಡೆಯಿತು. ಶ್ರೀಕಾಂತ್ ನಾಯಕ್ ಸ್ವಾಗತಿಸಿದರು. ಸವಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶೋಭಾ ಶೆಟ್ಟಿ ವಂದಿಸಿದರು.
Kshetra Samachara
02/05/2022 03:35 pm