ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶಕ್ಕೆ ಸಚಿವರಿಂದ ಚಾಲನೆ

ಮಣಿಪಾಲ: ಎಸ್‌ಸಿಡಿಸಿಸಿ ಬ್ಯಾಂಕ್‌ನ 111ನೇ ನೂತನ ಶಾಖೆ ಕಾರ್ಯಾರಂಭದ ಕಾರ್ಯಕ್ರಮವು ಅಭೂತಪೂರ್ವ ಮಹಿಳಾ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶಕ್ಕೆ ಸಾಕ್ಷಿಯಾಯಿತು.

ನವೋದಯ ಸ್ವಸಹಾಯ ಸಂಘಗಳು ಸಂಘಟನಾತ್ಮಕವಾಗಿ ಬಲಾಡ್ಯಗೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶವು 15,000 ಮಹಿಳೆಯರ ಉಪಸ್ಥಿತಿಯಲ್ಲಿ ನಡೆಯಿತು. ಮಣಿಪಾಲ ಟೈಗರ್ ಸರ್ಕಲ್‌ನಿಂದ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದು ಎಂ.ಐ.ಟಿ. ಕಾಲೇಜು ಎದುರುಗಡೆಯ ಮೈದಾನದಲ್ಲಿ ಮಹಿಳಾ ಸ್ವಸಹಾಯ ಗುಂಪುಗಳ ಸಮಾವೇಶ ನಡೆಯಿತು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ದೀಪ ಪ್ರಜ್ವಲನೆ ಮಾಡುವ ಮೂಲಕ ಸಾಧನಾ ಸಮಾವೇಶವನ್ನು ಉದ್ಘಾಟಿಸಿದರು.

Edited By : Shivu K
Kshetra Samachara

Kshetra Samachara

03/05/2022 03:24 pm

Cinque Terre

2.85 K

Cinque Terre

0

ಸಂಬಂಧಿತ ಸುದ್ದಿ