ಮುಲ್ಕಿ: ಮುಲ್ಕಿ ಸಮೀಪದ ಪಡುಪಣಂಬೂರು ಪಡು ತೋಟ ಶ್ರೀ ಕೋರ್ದಬ್ಬು ದೈವಸ್ಥಾನ ದಲ್ಲಿ ಶ್ರೀ ಕೋರ್ದಬ್ಬು ಹಾಗೂ ತನ್ನಿಮಾನಿಗ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.
ರಾತ್ರಿ8 ಗಂಟೆಗೆ ವಿಶೇಷ ಪ್ರಾರ್ಥನೆ ಹಾಗೂ ಭಂಡಾರ ಇಳಿಯುವ ಕಾರ್ಯಕ್ರಮ, ಅನ್ನಸಂತರ್ಪಣೆ ಬಳಿಕ ಶ್ರೀ ಕೋರ್ದಬ್ಬು ತನ್ನಿಮಾನಿಗ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಭಕ್ತಾದಿಗಳು, ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.
Kshetra Samachara
08/05/2022 09:55 am