ಉಡುಪಿ : ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿ ಯೇಶನ್ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಎರಡು ದಿನಗಳ ಕರ್ನಾಟಕ ರಾಜ್ಯ ಹಿರಿಯರ ಮತ್ತು ೨೦ ವಯೋಮಿತಿಯ ಪುರುಷ ಹಾಗೂ ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಮೂಡಬಿದ್ರೆಯ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.
ಇಂದು ನಡೆದ ಚಾಂಪಿಯನ್‌ಶಿಪ್‌ನ ಸಮಾರೋಪ ಸಮಾರಂಭದಲ್ಲಿ ರಾಜ್ಯ ಕ್ರೀಡಾಕೂಟ ಸಂಘಟನಾ ಸಮಿತಿ ಅಧ್ಯಕ್ಷ, ಶಾಸಕ ಕೆ.ರಘುಪತಿ ಭಟ್ ವಿಜೇತರಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ಅಶ್ವಿನಿ ಅಕ್ಕುಂಜೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
09/05/2022 07:48 pm