ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರಿನ ಗಾನಸಿರಿ ಸಂಸ್ಥೆಗೆ ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿ

ಪುತ್ತೂರು : ಕಳೆದ 21 ವರ್ಷಗಳಿಂದ ಸುಗಮ ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಗಾನಸಿರಿ ಸಂಸ್ಥೆಗೆ ಖಾಸಗಿ ಸಂಸ್ಥೆ ಕೊಡಮಾಡುವ ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಗಾನಸಿರಿ ಸಂಸ್ಥೆಯ ನಿರ್ದೇಶಕ ಕಿರಣ್ ಕುಮಾರ್ ಮಾಹಿತಿ ನೀಡಿದರು.

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸ್ಥೆಯು ಈವರೆಗೆ ಸುಮಾರು 21 ಸಾವಿರ ವಿದ್ಯಾರ್ಥಿಗಳಿಗೆ ಸುಗಮ ಸಂಗೀತ ಗಾಯನ ತರಭೇತಿಯನ್ನು ನೀಡಿರುವುದು ರಾಜ್ಯದಲ್ಲೇ ಒಂದು ದಾಖಲೆಯಾಗಿದೆ.

ಈ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ನಾಡಿನಾದ್ಯಂತ ಈವರೆಗೆ 2000 ಕ್ಕೂ ಅಧಿಕ ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದ ಅವರು ಪ್ರಶಸ್ತಿ ಸಮಾರಂಭವು ಮೇ 25 ರಂದು ಬೆಂಗಳೂರಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದ್ದು, ಹಿರಿಯ ನಟಿ ಭಾರತೀ ವಿಷ್ಣುವರ್ಧನ್ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪಡೆಯಲಿದ್ದೇವೆ ಎಂದು ಅವರು ತಿಳಿಸಿದರು.

Edited By : Shivu K
Kshetra Samachara

Kshetra Samachara

11/05/2022 01:50 pm

Cinque Terre

14.3 K

Cinque Terre

0

ಸಂಬಂಧಿತ ಸುದ್ದಿ