ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಂಜಿಮಠ: ದೈವಸ್ಥಾನಗಳು ಭಕ್ತಿಯ ಪ್ರತೀಕ: ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಗಂಜಿಮಠ: ಪೆರಾರ ಶ್ರೀ ಧೂಮಾವತಿ ಬಂಟ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ ವಿಜ್ರಂಭಣೆಯಿಂದ ನಡೆಯಿತು.

ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಅವರು ಮಾತನಾಡಿ ದೈವಸ್ಥಾನಗಳು ಭಕ್ತಿಯ ಪ್ರತೀಕವಾಗಿದ್ದು ಧಾರ್ಮಿಕತೆಯ ಮೂಲಕ ದೈವಸ್ಥಾನಗಳ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸುತ್ತಿರುವ ಭಕ್ತರ ಹಾಗೂ ದಾನಿಗಳ ಕಾರ್ಯ ಶ್ಲಾಘನೀಯ ಎಂದರು. ಇದೇ ಸಂದರ್ಭದಲ್ಲಿ ಸ್ವಾಮೀಜಿಯವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.

ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕ ರಾಹುಲ್ ಸಿ ಭಟ್, ಉದ್ಯಮಿ ಅರುಣ್ ರೈ ಅಳಿಕೆಗುತ್ತು ,ಬಾಲಕೃಷ್ಣ ಮುಕ್ಕಾಲ್ಡಿ ಅಳಿಕೆಗುತ್ತು, ಸಂಚಾಲಕ ಪುನೀತ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/05/2022 07:23 am

Cinque Terre

2.17 K

Cinque Terre

0

ಸಂಬಂಧಿತ ಸುದ್ದಿ