ಬೋಂದೆಲ್ :12 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರದ ಬೋಂದೆಲ್‌ನಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕನ್ನಡ ಭವನ ಮತ್ತು ಜಿಲ್ಲಾ ರಂಗಮಂದಿರದ ಸ್ಥಳ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹಾಗೂ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಭೇಟಿ ನೀಡಿದರು.
ರಂಗ ಮಂದಿರ ನಿಮಾಣಕ್ಕೆ ಸರ್ಕಾರದಿಂದ ಒಟ್ಟಾರೆ 12 ಕೋಟಿ ರೂ.ಗಳ ಹಣ ಮಂಜೂರಾಗಿದ್ದು, ಅದರಲ್ಲಿ ಸುಸಜ್ಜಿತ ರಂಗಮಂದಿರದ ನಿರ್ಮಾಣ, ಕಲಾ ಚಟುವಟಿಕೆಗಳಿಗೆ ಅಗತ್ಯವಿರುವ ವೇದಿಕೆ, ಗ್ರೀನ್ ರೂಮ್ ಸೇರಿದಂತೆ ಒಟ್ಟಾರೆ ವಿನ್ಯಾಸವೊಂದನ್ನು ಸಿದ್ಧಪಡಿಸಲಾಗುವುದು.
ಈ ಸಂದರ್ಭ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ನಿಗಮದ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಸ್ಥಳೀಯ ಪಾಲಿಕೆ ಸದಸ್ಯ ಲೋಹಿತ್ ಅಮೀನ್, ಜಿ.ಪ.ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಕುಮಾರ್, ಡೆಪ್ಯೂಟಿ ತಹಶೀಲ್ದಾರ್ ನವೀನ್, ಸ್ಮಾಟ್ ಸಿಟಿ, ಮಹಾನಗರ ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳು ಸಭೆಯಲ್ಲಿದ್ದರು.
Kshetra Samachara
17/05/2022 07:01 pm